ರಾಜ್ಯದಲ್ಲೇ ಮೊದಲು ಟ್ರ್ಯಾಕ್ಟರ್ ಲೈಸೆನ್ಸ್ ಪಡೆದಿದ್ದ ಮಹಿಳೆ ಸುಮಂಗಲಮ್ಮ ಇನ್ನಿಲ್ಲ

(ನ್ಯೂಸ್ ಕಡಬ) newskadaba,ಚಿತ್ರದುರ್ಗ ಜೂ.23: ರಾಜ್ಯದಲ್ಲಿ ಮೊದಲು ಟ್ರ್ಯಾಕ್ಟರ್ ಲೈಸೆನ್ಸ್ ಪಡೆದಿದ್ದ ಮಹಿಳೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಸುಮಂಗಲಮ್ಮ ವೀರಭದ್ರಪ್ಪ(69) ವಿಧಿವಶರಾಗಿದ್ದಾರೆ.

ಹೃದಯಾಘಾತದಿಂದ ಇಂದು ಬೆಳಗಿನ ಜಾವ 3.30ಕ್ಕೆ ಸುಮಂಗಲಮ್ಮ ನಿಧನರಾಗಿದ್ದಾರೆ. ಅಂತ್ಯಕ್ರಿಯೆ ಅವರ ಕರ್ಮ ಭೂಮಿಯಲ್ಲೆ ಇಂದು ನೆರವೇರಿದ್ದು, ಮೃತರ ನಿಧನಕ್ಕೆ ಜಿಲ್ಲೆಯ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಕೃಷಿಕ ಬಂಧುಗಳು ಕಂಬನಿ ಮಿಡಿದಿದ್ದಾರೆ. ಮಕ್ಕಳಿಗೆ ಶಿಕ್ಷಣ ಕೊಡಿಸಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವಂತೆ ಬೆಳೆಸಿದ್ದಲ್ಲದೆ, ತಾವು ನಂಬಿದ ಕೃಷಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ದಣಿವರಿಯದೆ ದುಡಿಮೆ ಮಾಡುತ್ತಿದ್ದ ಸುಮಂಗಲಮ್ಮ, ಟ್ರ್ಯಾಕ್ಟರ್ ಡ್ರೈವಿಂಗ್ ಲೈಸೆನ್ಸ್ ಪಡೆದ ರಾಜ್ಯದ ಮೊದಲ ಮಹಿಳೆಯಾಗಿ, ಜಮೀನಲ್ಲಿ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದರು.ಇವರ ಕಾರ್ಯ ಗಮನಿಸಿದ ರಾಜ್ಯ ಸರ್ಕಾರ, ಕೃಷಿ ಮತ್ತು ಸಾಮಾಜಿಕ ಕ್ಷೇತ್ರದ ಸಾಧನೆಗಾಗಿ 2020-21ನೇ ಸಾಲಿನ ರಾಜ್ಯೋತ್ಸವವ ಪ್ರಶಸ್ತಿ ನೀಡಿ ಗೌರವಿಸಿತ್ತು.

Scroll to Top