(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.24: 3ನೇ ಅಲೆಗೆ ಕಾರಣವಾಗಬಹುದು ಎಂಬ ಆತಂಕ ಹುಟ್ಟುಹಾಕಿರುವ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ತಳಿಯ ವೈರಸ್ ಇದೀಗ ಬೆಂಗಳೂರಿನಲ್ಲಿಯೂ ಕಾಣಿಸಿಕೊಂಡಿದೆ.
ಡೆಲ್ಟಾ ಪ್ಲಸ್ ವೈರಸ್ ಮೊದಲ ಪ್ರಕರಣ ಮೈಸೂರಿನಲ್ಲಿ ಪತ್ತೆಯಾಗಿತ್ತು. ಇದೀಗ ಬೆಂಗಳೂರಿನಲ್ಲಿಯೂ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ದೃಢಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸುಧಾಕರ್ ಅವರು, ಮಂಗಳವಾರ ಮೈಸೂರಿನಲ್ಲಿ ಒಂದು ಪ್ರಕರಣ ಪತ್ತೆಯಾಗಿತ್ತು. ಬುಧವಾರ ಬೆಂಗಳೂರಿನಲ್ಲಿ ಮತ್ತೊಂದು ಪ್ರಕರಣ ಕಂಡುಬಂದಿದೆ. ಬೆಂಗಳೂರಿನಲ್ಲಿ ರೋಗಿಯನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದರೊಂದಿಗೆ ಕರ್ನಾಟಕದಲ್ಲಿ ಒಟ್ಟು ಎರಡು ಪ್ರಕರಣಗಳು ಪತ್ತೆಯಾದಂತಾಗಿದೆ ಎಂದು ತಿಳಿಸಿದ್ದಾರೆ.