ರಾಜ್ಯದಲ್ಲಿ ಪಶು ಸಹಾಯವಾಣಿ ಕಾರ್ಯಾರಂಭ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.24: ಭಾರತದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಪಶುಪಾಲನೆ ಮತ್ತು ರೈತರ ತರಬೇತಿಗೆ ಸಂಬಂಧಿಸಿದ 24×7 ಪ್ರಾಣಿ ಕಲ್ಯಾಣ ಸಹಾಯವಾಣಿ ಬುಧವಾರದಿಂದ ಕಾರ್ಯಾರಂಭ ಮಾಡಿದೆ.

ಬೆಂಗಳೂರಿನ ಹೆಬ್ಬಾಳದ ಪಶುಪಾಲನಾ ಭವನದಲ್ಲಿ ಕಾರ್ಯಾರಂಭ ಮಾಡಿರುವ ಈ ಸಹಾಯವಾಣಿಯನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಾಣೆ ಮಾಡಿ ಮಾತನಾಡಿದ ಅವರು, ದೇಶದಲ್ಲಿಯೇ ಮೊದಲ ಬಾರಿಗೆ ನಮ್ಮರಾಜ್ಯದಲ್ಲಿ ಆರಂಭಗೊಂಡಿರುವ ಸುಸಜ್ಜಿತ ಪ್ರಾಣಿ ಕಲ್ಯಾಣ ಸಹಾಯವಾಣಿ ರೈತರು, ಸಾಕಾಣಿಕೆದಾರರನ್ನು ತಲುಪಲು ಮತ್ತು ಜಾನುವಾರುಗಳ ಆರೋಗ್ಯ ಮತ್ತು ಉತ್ಪಾದಕತೆ ಹೆಚ್ಚಿಸಲು ಪ್ರಮುಖ ಪಾತ್ರ ವಹಿಸಲಿದೆ ಎಂದರು.


ಪಶುಸಂಗೋಪನೆಯನ್ನೇ ಬಹಳಷ್ಟು ಜನರು ಆದಾಯದ ಮೂಲ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಸಮಸ್ಯೆಗಳು ಉದ್ಭವಿಸಿದಾಗ ಸಹಾಯವಾಣಿಗೆ (8277100200) ಕರೆ ಮಾಡಿ ಪರಿಹಾರ ಕಂಡು ಕಂಡುಕೊಳ್ಳಬಹುದುು.ಕುರಿ, ಮೇಕೆ,ಮೊಲ, ಹಂದಿ, ಕೋಳಿ ಸಾಕಾಣಿಕೆ, ಹೈನುಗಾರಿಕೆ ಬಗ್ಗೆ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು

error: Content is protected !!

Join the Group

Join WhatsApp Group