ಈಶ್ವರಮಂಗಲ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

(ನ್ಯೂಸ್ ಕಡಬ) newskadaba,ಈಶ್ವರಮಂಗಲ ಜೂ.24: ಈಶ್ವರಮಂಗಲದ ನೇರೊಲ್ತಡ್ಕ ನಿವಾಸಿ ಶರತ್(20) ಎಂಬುವವರು ರಬ್ಬರ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜೂ 24 ರ ಇಂದು ಮಧ್ಯಾಹ್ನ ಇದ್ದಕ್ಕಿದ್ದಂತೆ ಮನೆಯಾಗಿದ್ದ ಶರತ್ ಅವರನ್ನು ಹುಡುಕಾಡಿದಾಗ ಮನೆಯಿಂದ ಸ್ವಲ್ಪ ದೂರದಲ್ಲಿದ್ದ ರಬ್ಬರ್ ತೋಟವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಈಶ್ವರಮಂಗಲ ಹೊರಾ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top