ಕಡಬ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಇಬ್ಬರು ಗಂಭೀರ



(ನ್ಯೂಸ್ ಕಡಬ) newskadaba.com ಕಡಬ, ಜೂ.25. ಕಾರುಗಳೆರಡು ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಸಮೀಪದ ಕುಂಡಾಜೆ ಎಂಬಲ್ಲಿ ಶುಕ್ರವಾರದಂದು ನಡೆದಿದೆ.





ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಆಲ್ಟೋ 800 ಹಾಗೂ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬಲೆನೋ ಕಾರಿನ ನಡುವೆ ಕುಂಡಾಜೆ ಸಮೀಪದ ಕಿರು ಸೇತುವೆಯ ತಿರುವಿನಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಎಸ್ಐ ರುಕ್ಮನಾಯ್ಕ್, ಎಎಸ್ಐ ಸುರೇಶ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 

 

 

error: Content is protected !!
Scroll to Top