ಕಡಬ: ಕೊರೋನಾ ಲಸಿಕಾ ಅಭಿಯಾನ ➤ ಜೂ.28ರಂದು ಶಿಕ್ಷಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ

(ನ್ಯೂಸ್ ಕಡಬ) newskadaba.com ಕಡಬ, ಜೂ.26. ಸೋಮವಾರ (ಜೂ.28) ಕಡಬ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಲಸಿಕೆ ಕೋವಿಶೀಲ್ಡ್ ದೊರೆಯಲಿದೆ.

ಶಿಕ್ಷಕರಿಗೆ 200 ಡೋಸ್ ಮತ್ತು ಡಿಗ್ರೀ ಮೇಲ್ಪಟ್ಟ ಅಥವಾ ತತ್ಸಮಾನ ವಿದ್ಯಾಭ್ಯಾಸಗೈಯುತ್ತಿರುವ ಕಾಲೇಜು ವಿದ್ಯಾರ್ಥಿಗಳಿಗೆ 100 ಡೋಸ್ ಲಸಿಕೆ ಸೋಮವಾರ ಬೆಳಿಗ್ಗೆ 8 ಗಂಟೆಯಿಂದ ಲಭ್ಯವಿರಲಿದೆ. ಲಸಿಕೆ ತೆಗೆದುಕೊಳ್ಳಲು ಆಗಮಿಸುವವರು ಕಡ್ಡಾಯವಾಗಿ ಶಿಕ್ಷಣ ಸಂಸ್ಥೆಯ ಐಡಿ ಕಾರ್ಡ್ ತರುವಂತೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Scroll to Top