ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್ ನಿಯಂತ್ರಣದಲ್ಲಿದೆ ➤ ಸಿಎಂ ಯಡಿಯೂರಪ್ಪ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.26: ರಾಜ್ಯದಲ್ಲಿ ಪ್ರಸ್ತುತ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರಿ ವೈರಸ್ ನಿಯಂತ್ರಣದಲ್ಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್-19 ರ ರೂಪಾಂತರಿ ಡೆಲ್ಟಾ ಬಗ್ಗೆ ರಾಜ್ಯದಲ್ಲಿರುವ ಪ್ರಸ್ತುತ ಇರುವ ಪರಿಸ್ಥಿತಿ ಯ ಬಗ್ಗೆ ಪರಾಮರ್ಶೆ ಸಭೆ ನಡೆಸಿದರು.

ಸಭೆಯಲ್ಲಿ ರಾಜ್ಯದಲ್ಲಿ ಡೆಲ್ಟಾ ವೈರಸ್ ಸಧ್ಯಕ್ಕೆ ಹತೋಟಿಯಲ್ಲಿದ್ದು, ವೈರಸ್ ಬಗ್ಗೆ ತೀವ್ರ ನಿಗಾ ಇಡುವಂತೆಯೂ ಗಡಿಭಾಗದಲ್ಲಿ ಮಹಾರಾಷ್ಟ್ರ ದಲ್ಲಿ ಡೆಲ್ಟಾ ವೈರಸ್ ಕಂಡುಬರುತ್ತಿರುವುದರಿಂದ ಬಾರ್ಡರ್ ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಹಾಗೂ ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರ ಬಗ್ಗೆನು ಸಹ ತೀವ್ರ ನಿಗಾ ಇಟ್ಟು ಅವರನ್ನು ಕೊರೋನಾ ಟೆಸ್ಟ್’ಗೆ ಒಳಪಡಿಸುವಂತೆ ಸೂಚಿಸಿದರು.

Scroll to Top