ಮರ್ಧಾಳ: ಬೈಕ್ – ಕಾರು ಢಿಕ್ಕಿ ► ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಅ.29. ಬೈಕ್ ಹಾಗೂ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮರ್ಧಾಳ ಬೊಳ್ಳೂರು ರಸ್ತೆಯ ಮಿತ್ತೋಡಿ ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರರಾದ ಮರ್ಧಾಳ ನಿವಾಸಿ ಮಂಜು ಹಾಗೂ ಸಂತೋಷ್ ಎಂಬವರು ಗಾಯಗೊಂಡಿದ್ದಾರೆ. ಬೊಳ್ಳೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಮರ್ಧಾಳ ಕಡೆಗೆ ತೆರಳುತ್ತಿದ್ದ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿದೆ. ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!
Scroll to Top