“ಬಾಲಕಾರ್ಮಿಕತೆ ನಿಲ್ಲಿಸಿ- ಶಿಕ್ಷಣ ಒದಗಿಸಿ” ➤ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಸಂಬಂಧಿತ ಇಲಾಖೆಗಳಿಗೆ ಮನವಿ

(ನ್ಯೂಸ್ ಕಡಬ) Newskadaba.com ಉಡುಪಿ, ಜೂ. 27. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿರುವಂತಹ “ಬಾಲಕಾರ್ಮಿಕತೆ ನಿಲ್ಲಿಸಿ- ಶಿಕ್ಷಣ ಒದಗಿಸಿ” ಎಂಬ ಅಭಿಯಾನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಸಾರ್ವಜನಿಕ ಶಿಕ್ಷಣದ ಉಪನಿರ್ದೇಶಕರು, ಕಾರ್ಮಿಕ ಇನ್ಸ್‌ಪೆಕ್ಟರ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿಯನ್ನು ನೀಡಲಾಯಿತು. ಗ್ರಾಮದಲ್ಲಿರುವ ಪ್ರತಿಯೊಂದು ವಿದ್ಯಾರ್ಥಿ ಕೂಡಾ ಶಿಕ್ಷಣದಿಂದ ವಂಚಿತರಾಗಬಾರದು. ಬಾಲ ಕಾರ್ಮಿಕತೆಗೆ ಒಳಗಾದ ಮಕ್ಕಳಿದ್ದರೆ ಅವರಿಗೆ ಶಿಕ್ಷಣ ಒದಗಿಸುವ ಯೋಜನೆಯನ್ನು ಸರ್ಕಾರ ರೂಪಿಸಬೇಕು, ಕಾರ್ಯಾಂಗ ವ್ಯವಸ್ಥೆಯನ್ನು ಸರಿಯಾಗಿ ಸದುಪಯೋಗಪಡಿಸಿ ತಳಮಟ್ಟದಲ್ಲಿ ಅಂದರೆ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆಯ ಅಡಿಯಲ್ಲಿ ಬಾಲ ಕಾರ್ಮಿಕತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದ ಬಗ್ಗೆ ಸರಕಾರ ಚಿಂತಿಸಬೇಕಾಗಿದೆ ಎಂದು ಆಗ್ರಹಿಸಿ ಮನವಿಯನ್ನು ನೀಡಲಾಯಿತು.

Also Read  ಕೃಷಿಗೆ ಸಂಬಂಧಿಸಿದ ಸರ್ಕಾರಿ ಯೋಜನೆಗಳ ಸದ್ಬಳಕೆಯಾಗಲಿ ➤ ಕೃಷ್ಣ ಕುಮಾರ್

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷ ಅಸೀಲ್ ಅಕ್ರಮ್, ಜಿಲ್ಲಾ ಕಾರ್ಯದರ್ಶಿ ಮಸೂದ್ ಮನ್ನಾ, ಯುನಿಟ್ ನಾಯಕರುಗಳಾದ ನೌಫಲ್, ತಾಬಿಷ್ ಮತ್ತು ಸದಸ್ಯರಾದ ಅದ್ನಾನ್, ನಿಹಾದ್ ಮತ್ತು ಅಮಾನ್ ಉಪಸ್ಥಿತರಿದ್ಧರು.

error: Content is protected !!