ರಾಜ್ಯದಲ್ಲಿ ಮತ್ತೆ ಏರಿದ ಕೊರೋನಾ ➤ 4 ಸಾವಿರಕ್ಕೂ ಹೆಚ್ಚು ಹೊಸ ಕೇಸ್ ಪತ್ತೆ



(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.27: ಲಾಕ್ಡೌನ್ ಸಡಿಲಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ತನ್ನ ಆರ್ಭಟವನ್ನು ಮತ್ತೆ ಆರಂಭ ಮಾಡಿರುವ ಸೂಚನೆ ಕಂಡು ಬರುತ್ತಿದೆ. ರಾಜ್ಯದಲ್ಲಿ ಶನಿವಾರ 4,272 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.







ಕಳೆದ ಒಂದು ವಾರದಿಂದ ಸೋಂಕಿನ ಪ್ರಮಾಣ ಇಳಿಕೆ ಕ್ರಮಾಂಕದಲ್ಲಿದ್ದ ಕಾರಣ ಸಕ್ರಿಯ ಸೋಂಕು ಪ್ರಕರಣಗಳು ಒಂದು ಲಕ್ಷದ ಆಸುಪಾಸಿಗೆ ಕುಸಿದಿದೆ. ಈ ನಡುವೆ ಪಾಸಿಟಿವಿಟಿ ಪ್ರಮಾಣ ಶೇ.8.43 ರಿಂದ ಶೇ.8.40ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಂತ್ಯದಲ್ಲಿದ್ದು, ಮೂರು ಅಂಕಿಗೆ ಸೋಂಕಿತರ ಸಂಖ್ಯೆ ಬರುವವರೆಗೂ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.






 

error: Content is protected !!
Scroll to Top