(ನ್ಯೂಸ್ ಕಡಬ) newskadaba,ಉಡುಪಿ ಜೂ.27: ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಸುಬ್ರಹ್ಮಣ್ಯನಗರ ವಾರ್ಡಿನಲ್ಲಿ 11 ಎಕರೆ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗುತ್ತಿದ್ದು, ಇಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಶಾಸಕ ಕೆ. ರಘುಪತಿ ಭಟ್ ಅವರೊಂದಿಗೆ ಭೂ ಮಾತೆಗೆ ಹಾಲನ್ನು ಅರ್ಪಿಸಿ ನಾಟಿ ಕಾರ್ಯಕ್ಕೆ ಚಾಲನೆ ನೀಡಿ ಸ್ಥಳೀಯರೊಂದಿಗೆ ಸೇರಿ ನೇಜಿ ನೆಟ್ಟರು.ಈ ಭಾಗದಲ್ಲಿ ಹಡಿಲು ಭೂಮಿ ಆಂದೋಲನಕ್ಕೆ ಸಹಕರಿಸಿದ ಸಂಘ – ಸಂಸ್ಥೆಯವರಿಗೆ, ಭೂ ಮಾಲಕರಿಗೆ, ಸ್ಥಳೀಯರಿಗೆ ಶಾಸಕರಾದ ಕೆ. ರಘುಪತಿ ಭಟ್ ಅವರು ಅಭಿನಂದನೆ ಸಲ್ಲಿಸಿದರು.