ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ ➤ 23 ದನಗಳ ರಕ್ಷಣೆ

(ನ್ಯೂಸ್‌ ಕಡಬ) Newskadaba.com ಕುಂದಾಪುರ, ಜೂ. 28. ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿದ ಪೊಲೀಸರು ಮಾಂಸಕ್ಕಾಗಿ ಕೂಡಿಟ್ಟಿದ್ದ 23 ದನಗಳನ್ನು ರಕ್ಷಿಸಿದ ಘಟನೆ ತಾಲೂಕಿನ ಗುಳ್ವಾಡಿ ಎಂಬಲ್ಲಿ ನಡೆದಿದೆ.

ಇತ್ತೀಚಿನ‌ ದಿನಗಳಲ್ಲಿ ಕುಂದಾಪುರ ಪರಿಸರದಲ್ಲಿ ದನಗಳ್ಳತನ ನಡೆಯುತ್ತಿರುವ ಕುರಿತು ದೂರುಗಳು ಕೇಳಿಬರುತ್ತಿದ್ದು, ಈ ಹಿನ್ನೆಲೆ ಗುಳ್ವಾಡಿ ಗ್ರಾಮದ ಅಬೂಬಕ್ಕರ್ ಎಂಬವರ ಮನೆ ಮೇಲೆ ಹಿಂದೂ ಸಂಘಟನೆ ಹಾಗೂ ಪೊಲೀಸರು ದಾಳಿ ನಡೆಸಿದಾಗ ಮಾಂಸಕ್ಕೆಂದು ಕೂಡಿಡಲಾದ 23 ದನಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಕಂಡ್ಲೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಪತ್ನಿಗೆ ಗಂಡು ಮಗು ಆಗಿಲ್ಲವೆಂದು ಪತಿಯಿಂದ ಮಾರಣಾಂತಿಕ ಹಲ್ಲೆ

error: Content is protected !!
Scroll to Top