ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಚೆಕ್ ಪೋಸ್ಟ್ ಧ್ವಂಸ ➤ 15 ಮಂದಿಯ ವಿರುದ್ಧ ಪ್ರಕರಣ ದಾಖಲು

ಕಡಬ, ಜೂ.29: ವಾಹನ ತಪಾಸಣೆಯ ಸ್ಥಳದಲ್ಲಿ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಹಿನ್ನೆಲೆಯಲ್ಲಿ ನೂರಾರು ಜನರು ಜಮಾಯಿಸಿ ಪ್ರತಿಭಟನೆ ನಡೆಸಿದ ಘಟನೆ ಠಾಣಾ ವ್ಯಾಪ್ತಿಯ ಆತೂರು ಎಂಬಲ್ಲಿ ಮಂಗಳವಾರದಂದು ನಡೆದಿದೆ.

ಮೃತ ಸವಾರನನ್ನು ಕೊಯಿಲ ಗ್ರಾಮದ ಆತೂರು ಬೈಲು ನಿವಾಸಿ ಕುಂಞಿಮೋನು ಎಂಬವರ ಪುತ್ರ ಎನ್.ಹಾರಿಸ್(33) ಎಂದು ಗುರುತಿಸಲಾಗಿದೆ. ಮೃತರು ತನ್ನ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿದ್ದ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಕಡಬ ಪೊಲೀಸರು ವಾಹನವನ್ನು ತಡೆದಿದ್ದಾರೆ. ಈ ವೇಳೆ ದಾಖಲಾತಿಯನ್ನು ಪೊಲೀಸರಿಗೆ ತೋರಿಸಿ ರಸ್ತೆ ದಾಟುತ್ತಿದ್ದ ವೇಳೆ ಟಾಟಾ ಏಸ್ ಗೂಡ್ಸ್ ವಾಹನವು ಢಿಕ್ಕಿ ಹೊಡೆದಿದ್ದು, ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಹಾರಿಸ್ ರನ್ನು ಕಡಬ ಎಸ್ಐ ರುಕ್ಮನಾಯ್ಕ್ ತಕ್ಷಣವೇ ತನ್ನ ವಾಹನದಲ್ಲಿ ಕೊಯಿಲ ಸರಕಾರಿ ಆಸ್ಪತ್ರೆಗೆ ಕರೆದೊಯ್ದರಾದರೂ ಅದಾಗಲೇ ಮೃತಪಟ್ಟಿದ್ದಾರೆ‌.

Also Read  ಎಸ್.ಸಿ.ಡಿ.ಸಿ.ಸಿ ಅಧ್ಯಕ್ಷ ರಾಜೇಂದ್ರ ಅವರಿಗೆ ಬಿಜೆಪಿ ಸೇರಲು ಮತ್ತೊಮ್ಮೆ ಆಹ್ವಾನ

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳದಲ್ಲಿ ನೂರಾರು ಜನ ಜಮಾಯಿಸತೊಡಗಿದ್ದು, ಪೊಲೀಸರು ಚೆಕ್ ಪೋಸ್ಟ್ ನಲ್ಲಿ ಸಮಯಕ್ಕಿಂತ ಮೊದಲೇ ವಾಹನ ತಪಾಸಣೆ ನಡೆಸುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಬ್ಯಾರಿಕೇಡ್ ಎಸೆದು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಪೊಲೀಸರು ಕುಳಿತುಕೊಳ್ಳಲೆಂದು ಸಾರ್ವಜನಿಕರು ನಿರ್ಮಿಸಿಕೊಟ್ಟಿದ್ದ ಶೆಡ್ ನ್ನು ಧ್ವಂಸಗೊಳಿಸಿದ್ದಾರೆ. ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ತಕ್ಷಣವೇ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಆಯೋಜಿಸಲಾಗಿದ್ದು, ಸ್ಥಳದಲ್ಲಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ. ಸ್ಥಳಕ್ಕೆ ಪುತ್ತೂರು ಉಪವಿಭಾಗದ ಹೆಚ್ಚುವರಿ ಅಧೀಕ್ಷಕರಾದ ಗಾನಕುಮಾರಿ, ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾದ ಉಮೇಶ್ ಉಪ್ಪಳಿಕೆ ಮೊದಲಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಸಂಬಂಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ 15 ಮಂದಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮದ್ಯ ಸೇವಿಸಿ ವಿಮಾನದಲ್ಲಿ ಗದ್ದಲ ➤  ಇಬ್ಬರು ಅರೆಸ್ಟ್..!

 

 

 

error: Content is protected !!
Scroll to Top