ಉದ್ಯಾವರ ಬಳಿ ಅಪಘಾತ ➤ ಮುಲ್ಕಿ ಗೃಹರಕ್ಷಕ ದಳದ ಸಿಬ್ಬಂದಿ ಸಾವು

(ನ್ಯೂಸ್ ಕಡಬ) newskadaba,ಕಾಪು ಜೂ.30: ಕಾರೊಂದು ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಉದ್ಯಾವರ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ಗಾಯಾಳುವನ್ನು ಮುಲ್ಕಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಕೇಶ್(27) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಅವರನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರು, ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ರಾಕೇಶ್ ರಾತ್ರಿ ಪಾಳಿಯ ಕರ್ತವ್ಯ ಮುಗಿಸಿ ಇಂದು ಮುಂಜಾನೆ 5:30ರ ಸುಮಾರಿಗೆ ಮುಲ್ಕಿಯಿಂದ ತನ್ನ ಕಾರಿನಲ್ಲಿ ಉಡುಪಿಗೆ ತೆರಳುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಎದುರಿನಿಂದ ತೆರಳುತ್ತಿದ್ದ ಟ್ಯಾಂಕರ್ ನ ಹಿಂಭಾಗಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

error: Content is protected !!

Join the Group

Join WhatsApp Group