(ನ್ಯೂಸ್ ಕಡಬ) newskadaba,ನೆಲ್ಯಾಡಿ ಜೂ.30: ಹೊಸಮಜಲು ಎಂಬಲ್ಲಿ ಕೆಲವು ವರ್ಷಗಳಿಂದ ಅಕ್ರಮವಾಗಿ ಕಾರ್ಯಚರಿಸುತ್ತಿದ್ದ ಬೃಹತ್ ಫರ್ನಿಶಿಂಗ್ ಆಯಿಲ್ ಮಿಕ್ಸಿಂಗ್ ಅಡ್ಡೆಗೆ ಪುತ್ತೂರು ಡಿವೈಎಸ್ಪಿ ಗಾನಾ.ಪಿ ಕುಮಾರ್ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಎರಡು ಟ್ಯಾಂಕರ್, ಮಿಕ್ಸಿಂಗ್ ಗೆ ಬಳಸುತ್ತಿದ್ದ ಉಪಕರಣಗಳು ಸೇರಿದಂತೆ ಸ್ವತ್ತುಗಳನ್ನು ವಶಪಡಿಸಿಕೊಂಡು,ಪ್ರಾಥಮಿರ ಮಾಹಿತಿ ಪ್ರಕಾರ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಹಿಂದೆ ಹಲವಾರು ಬಾರಿ ಪೊಲೀಸರು, ಮಾಧ್ಯಮ ಪ್ರತಿನಿಧಿಗಳು ಈ ಅಕ್ರಮ ನಡೆಯುತ್ತಿರುವ ಅಡ್ಡೆಗೆ ದಾಳಿ ನಡೆಸಲು ಮುಂದಾಗಿದ್ದರೂ ಯಾವುದಾದರೂ ಮೂಲಗಳಿಂದ ಮಾಹಿತಿ ಸೋರಿಕೆಯಾಗಿ ಆ ಪ್ರಯತ್ನಗಳು ವಿಫಲವಾಗಿತ್ತು.ಆದರೆ ಇದೀಗ ಖಚಿತ ಮಾಹಿತಿ ಆಧರಿಸಿ ಪುತ್ತೂರು ಡಿವೈಎಸ್ಪಿ ಗಾನಾ ಪಿ.ಕುಮಾರ್ ನೇತೃತ್ವದ ಪೊಲೀಸರ ತಂಡವು ಈ ಅಡ್ಡೆಗೆ ದಾಳಿ ಮಾಡಿ ಅಕ್ರಮವನ್ನು ಪತ್ತೆಹಚ್ಚಿದೆ.ಈ ಆಕ್ರಮ ವ್ಯವಹಾರದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಎಂಬುದರ ಕುರಿತಾಗಿ ಪೊಲೀಸ್ ಅಧಿಕಾರಿಗಳು ಉನ್ನತ ಮಟ್ಟದ ತನಿಖೆ ನಡೆಸುತ್ತಿದ್ದಾರೆ.