(ನ್ಯೂಸ್ ಕಡಬ) newskadaba,ಮಂಗಳೂರು ಜೂ.30:ನಗರದ ಸಿಸಿಬಿ ಪೊಲೀಸರು ದೇರಳಕಟ್ಟೆಯಲ್ಲಿ ಬುಧವಾರ ನಡೆಸಿದ ಕಾರ್ಯಾಚರಣೆಯಲ್ಲಿ 1.236 ಗ್ರಾಂ ಹೈಡೋವೀಡ್ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಉಪ್ಪಳ ಮಂಗಲ್ಪಾಡಿ ನಿವಾಸಿ ಅಜ್ಮಲ್ ಟಿ. ಹಾಗೂ ಮೂಲತಃ ಕನ್ಯಾಕುಮಾರಿ ನಿವಾಸಿ, ಪ್ರಸ್ತುತ ಸುರತ್ಕಲ್‍ನಲ್ಲಿ ವಾಸವಿರುವ ಎಂಬಿಬಿಎಸ್ ವಿದ್ಯಾರ್ಥಿನಿ ಮಿನು ರಶ್ಮಿ ಬಂಧಿತ ಆರೋಪಿಗಳು. ಮಾರುಕಟ್ಟೆಯಲ್ಲಿ ಈ ಗಾಂಜಾ ಅಂದಾಜು 30 ಲಕ್ಷ ರೂ. ನಿಂದ ಒಂದು ಕೋಟಿ ರೂ. ವರೆಗೆ ಬೆಲೆಬಾಳುವಂತಹದ್ದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.ಆರೋಪಿಗಳು ಹೈಡ್ರೋವೀಡ್ ಗಾಂಜಾವನ್ನು ತರಿಸಿಕೊಂಡು ಕೊಣಾಜೆ, ಉಳ್ಳಾಲ, ಉಪ್ಪಳ ಹಾಗೂ ಮಂಗಳೂರು ಕಡೆಗಳಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ತಮ್ಮ ಏಜೆಂಟ್‍ಗಳಿಗೆ ನೀಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ.