ಕಡಬ: ಸ್ಕೂಟಿ ಹಾಗೂ ಓಮ್ನಿ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) Newskadaba.com ಕಡಬ, ಜು. 01. ಇಂದು ಬೆಳಗಿನ ಜಾವ ಸ್ಕೂಟಿ ಹಾಗೂ ಓಮ್ನಿ ನಡುವೆ ಢಿಕ್ಕಿ ಹೊಡೆದ ಇಬ್ಬರು ಗಾಯಗೊಂಡ ಘಟನೆ ಬಲ್ಯ ಎಂಬಲ್ಲಿ ನಡೆದಿದೆ.


ಅಲಂಕಾರಿನಿಂದ ಕಡಬಕ್ಕೆ ಬರುತ್ತಿದ್ದ ಸ್ಕೂಟರ್ ಹಾಗೂ ವಿರುದ್ದ ದಿಕ್ಕಿನಿಂದ ತೆರಳುತ್ತಿದ್ದ ಮಾರುತಿ ಓಮ್ನಿ ಕಾರಿನ ನಡುವರ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪರಿಣಾಮ ಬೈಕ್ ಸವಾರರಿಬ್ಬರಿಗೆ ಗಾಯಗಳಾಗಿದ್ದು, ಇವರನ್ನು ಚಿಕಿತ್ಸೆಗಾಗಿ ಕಡಬದ ಸರ್ಕಾರಿ ಆಸ್ಪತ್ರಗೆ ಕರೆದೊಯ್ಯಲಾಗಿದೆ. ಘಟನೆಯಲ್ಲಿ ಸ್ಕೂಟಿಯು ಓಮ್ನಿ ಕಾರಿನಡಿಯಲ್ಲಿ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿದೆ.

Scroll to Top