(ನ್ಯೂಸ್ ಕಡಬ) Newskadaba.com ಶಿವಮೊಗ್ಗ, ಜು. 01. ಡೆತ್ ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಗರ ತಾಲೂಕಿನ ಕೆಳದ್ರಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಸುಬ್ರಹ್ಮಣ್ಯ ಎಂಬವರ ಪುತ್ರ ಗಣೇಶ್(22) ಎಂದು ಗುರುತಿಸಲಾಗಿದೆ. ಈತ ಉಡುಪಿಯ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಎನ್ನಲಾಗಿದೆ. ಈತನ ಮೃತದೇಹದ ಬಳಿ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆದಿಡಲಾಗಿತ್ತು. ಈ ಕುರಿತು ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















