(ನ್ಯೂಸ್ ಕಡಬ) Newskadaba.com ಮಂಗಳೂರು, ಜು. 02. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಅನ್ ಲಾಕ್ ಮಾಡಿ, ಅಲ್ಲದೇ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಇಂದಿನಿಂದ ಹೊಸ ಮಾರ್ಗಸೂಚಿಯಂತೆ ಜಿಲ್ಲಾದ್ಯಂತ ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ವ್ಯಾಪಾರ ವಹಿವಾಟಿಗೆ ಅನುಮತಿ ನೀಡಲಾಗಿದ್ದು, ಬಸ್ ಸಂಚಾರ ಸೇರಿದಂತೆ ಎಲ್ಲಾ ಚಟುವಟಿಕೆಗಳಿಗೂ ಅವಕಾಶ ನೀಡಲಾಗಿದೆ. ಹಾಗೆಯೇ ಶನಿವಾರ ಮತ್ತು ಭಾನುವಾರ ಎಂದಿನಂತೆ ವೀಕೆಂಡ್ ಕರ್ಫ್ಯೂ ಇದೆಯಾದರೂ ಅದರಲ್ಲಿ ಹೊಸ ಮಾರ್ಗಸೂಚಿಯಂತೆ ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಈ ಸಡಿಲಿಕೆಯು ಹಾಲು, ತರಕಾರಿ, ಮೀನು, ಮಾಂಸ ಹಾಗೂ ದಿನಸಿ ಸಾಮಗ್ರಿ ಖರೀದಿಗಷ್ಟೇ ಸೀಮಿತವಾಗಿದ್ದು, ಉಳಿದಂತೆ ಎಲ್ಲವೂ ಬಂದ್ ಆಗಲಿದೆ. ಬಸ್ ಸಂಚಾರಕ್ಕೂ ಅವಕಾಶವಿಲ್ಲ ಎನ್ನಲಾಗಿದೆ.