ಪ್ರಸಿದ್ಧ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಜು.02:ಡಿಆರ್ ಡಿಒ ಮಾಜಿ ವಿಜ್ಞಾನಿ, ಹೆಚ್ಎಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್, ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಜುಲೈ 2 ರಂದು ಮಧ್ಯಾಹ್ನ ನಿಧನರಾಗಿದ್ದಾರೆ.

ಅವರಿಗೆ 61 ವರ್ಷ ವಯಸ್ಸಾಗಿತ್ತು. ವಾರದ ಹಿಂದೆ ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೊಗ್ಯ ಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದ ವೈದ್ಯರು “ಸುಧೀಂದ್ರ ಹಾಲ್ದೊಡ್ಡೇರಿ ಅವರ ಆರೋಗ್ಯ ಸುಧಾರಣೆ ಪರಿಸ್ಥಿತಿ ಕಷ್ಟವಿದೆ” ಎಂಬ ಮಾಹಿತಿ ನೀಡಿದ್ದರು. ಸುಧೀಂದ್ರ ಹಾಲ್ದೊಡ್ಡೇರಿ ಅವರ ಮೆದುಳಿಗೆ ಆಮ್ಲಜನಕ ಪೂರೈಕೆಯಾಗುವುದು ಸ್ಥಗಿತಗೊಂಡಿದ್ದರಿಂದ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ದೇಹದಾನಕ್ಕೆ ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Also Read  ಕರ್ನಾಟಕ ಗಾಂಧೀ ಸೇವಾ ಪ್ರಶಸ್ತಿ ➤ಅರ್ಜಿ ಹಾಗೂ ನಾಮನಿರ್ದೇಶನಗಳ ಆಹ್ವಾನ

error: Content is protected !!
Scroll to Top