ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತು ಶಿಶು ಕೊಲೆ..?!

(ನ್ಯೂಸ್ ಕಡಬ) newskadaba,ಚಿಕ್ಕಬಳ್ಳಾಪುರ ಜು.03:ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶು ಕೊಲೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ.

ಆಸ್ಪತ್ರೆಯಲ್ಲಿರುವ ಶೌಚಾಲಯದ ಕಿಟಕಿಗೆ ಮಗು ತೂರಿಸಿ ಕುತ್ತಿಗೆಗೆ ದಾರದಿಂದ ನೇಣು ಬಿಗಿದು ಕೊಲೆ ಮಾಡಲಾಗಿದೆ. ಇನ್ನೂ ಕೊಲೆಯಾದ ಮಗು ಹೆಣ್ಣಾಗಿದ್ದು, ಹೆಣ್ಣು ಮಗು ಅಂತಲೇ ಕೊಲೆ ಮಾಡಿದರಾ ಅನ್ನೋ ಅನುಮಾನ ದಟ್ಟವಾಗಿದೆ. ಅಂದಹಾಗೆ ಇಂದು ಬೆಳಗ್ಗೆ 8 ಗಂಟೆ 45 ನಿಮಿಷ ಸುಮಾರಿಗೆ ಆಸ್ಪತ್ರೆಗೆ ಬಂದ ಇಬ್ಬರು ಅಪರಿಚಿತ ಮಹಿಳೆಯರು ಹಾಗೂ ಓರ್ವ ಪುರುಷ ಶೌಚಾಲಯದೊಳಗೆ ಪ್ರವೇಶ ಮಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.ಈ ಸಂಬಂಧ ಚಿಂತಾಮಣಿ ತಾಲೂಕು ಆಸ್ಪತ್ರೆ ಸಹಾಯಕ ನಿವಾಸಿ ವೈದ್ಯಾಧಿಕಾರಿ ಸಂತೋಷ್ ಹಾಗೂ ತಾಲೂಕು ಆರೋಗ್ಯಾಧಿಕಾರಿ ದೂರಿನ ಮೇರೆಗೆ ಚಿಂತಾಮಣಿ ನಗರ ಪೊಲೀಸ್ ಠಾಣಾ ಸಿಪಿಐ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top