ವೀಕೆಂಡ್ ಕರ್ಫ್ಯೂ ರದ್ದು..‼️ ➤ ಸೋಮವಾರದಿಂದ ಅನ್ ಲಾಕ್

(ನ್ಯೂಸ್ ಕಡಬ) Newskadaba.com ಬೆಂಗಳೂರು, ಜು. 03. ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖ ಕಾಣುತ್ತಿದ್ದು, ಈಗಾಗಲೇ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿರುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.


ಜುಲೈ 5 ರಿಂದ 19ರ ವರೆಗೆ ಅನ್ ಲಾಕ್ 3.0 ಅನ್ವಯಿಸಲಿದ್ದು, ರಾತ್ರಿ 9 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗಿರುವ ಕಾರಣ ರಾಜ್ಯಾದ್ಯಂತ ಲಾಕ್ ಡೌನ್ ಸಡಿಲಿಸಲಾಗಿದ್ದು, ಸೋಮವಾರದಿಂದ ಜನ ಜೀವನ ಸಹಜ ಸ್ಥಿತಿಗೆ ಮರಳಲಿದೆ. ಜುಲೈ 5ರಿಂದ 14ದಿನಗಳ ಕಾಲ ಅನ್ ಲಾಕ್ ಜಾರಿಗೊಳಿಸಲಾಗಿದ್ದು, ರಾತ್ರಿ 9ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಇರಲಿದೆ. ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಲಾಗಿದೆ.
ಮಾಲ್ ಹಾಗೂ ದೊಡ್ಡ ಹೋಟೆಲ್ ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ವೀಕೆಂಡ್ ಕರ್ಫ್ಯೂ ರದ್ದುಪಡಿಸಿ ನೈಟ್ ಕರ್ಫ್ಯೂವನ್ನು ಮಾತ್ರ ಮುಂದುವರಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಚಿತ್ರಮಂದಿರ ತೆರೆಯಲು ಅವಕಾಶ ನೀಡಿಲ್ಲ. ಕೊಡಗು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಎಲ್ಲಾ ಚಟುವಟಿಕೆಗಳಿಗೆ ರಾತ್ರಿ 9 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ರಾತ್ರಿ ಕರ್ಫ್ಯೂ ಮುಂದುವರಿಸಲಾಗಿದೆ. ಸಾರಿಗೆ ಬಸ್ ಪೂರ್ಣ ಪ್ರಮಾಣದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. ಇನ್ನು ಮುಂದೆ ವೀಕೆಂಡ್ ಕರ್ಫ್ಯೂ ರದ್ದುಪಡಿಸಲಾಗಿದೆ ಎಂದರು. ಕೊಡಗಿನಲ್ಲಿ ಎಲ್ಲಾ ಚಟುವಟಿಕೆ ತೆರೆಯಲು ಅವಕಾಶ ನೀಡಿಲ್ಲ. ಈ ಬಗ್ಗೆ ಅಲ್ಲಿನ ಜಿಲ್ಲಾಧಿಕಾರಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು. ಮಸೀದಿ, ಮಠ ಮಂದಿರ, ಚರ್ಚ್ ತೆರೆಯಲು ಅವಕಾಶ ಕಲ್ಪಿಸಲಾಗಿದೆ.

Also Read  ಕೋಳಿಸಾಕಾಣಿಕೆ ಮತ್ತು ಫೋಟೋಗ್ರಫಿಯ ಉಚಿತ ತರಬೇತಿ: ಅರ್ಜಿ ಅಹ್ವಾನ

error: Content is protected !!
Scroll to Top