ಶಿರಾಡಿ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.05. ಶಿರಾಡಿಯ ಕೆಂಪುಹೊಳೆ ಎಂಬಲ್ಲಿ ಅಪರಿಚಿತ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಸೋಮವಾರದಂದು ಪತ್ತೆಯಾಗಿದೆ.

ಶಿರಾಡಿ ಘಾಟ್ ನ ಕೆಂಪುಹೊಳೆ ಸಮೀಪದ ಕಾಡಿನಲ್ಲಿ ಸುಮಾರು 50 ವರ್ಷ ಪ್ರಾಯದ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇರುವುದನ್ನು ಸ್ಥಳೀಯ ವ್ಯಕ್ತಿಯೋರ್ವರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಸಕಲೇಶಪುರ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

 

error: Content is protected !!
Scroll to Top