ಕಡಬ: ಮನೆಯಲ್ಲಿ ಅಕ್ರಮ ಜಿಂಕೆ ಮಾಂಸ ಪತ್ತೆ ➤ ಓರ್ವನ ಬಂಧನ

ಕಡಬ, ಜು.06: ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯ ಬಿಳಿನೆಲೆ ಎಂಬಲ್ಲಿ ಮನೆಯಲ್ಲಿ ಕಾಡುಪ್ರಾಣಿ ಮಾಂಸ ಇರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಅಧಿಕಾರಿಗಳು ಒರ್ವನನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಬಿಳಿನೆಲೆಯ ವಾಲ್ತಾಜೆ ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ. ಮಂಗಳವಾರ ಅರಣ್ಯಾಧಿಕಾರಿಗಳಿಗೆ ಮನೆಯಲ್ಲಿ ಕಾಡುಪ್ರಾಣಿ ಮಾಂಸ ಇರುವ ಬಗ್ಗೆ ಮಾಹಿತಿ ಬಂದಿತ್ತು. ಅದರಂತೆ ಅಲ್ಲಿಗೆ ದಾಳಿ ನಡೆಸಿದ ವೇಳೆ ಮನೆಯಲ್ಲಿ ಕಾಡುಪ್ರಾಣಿ ಮಾಂಸ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ವನ್ಯಜೀವಿ ಪ್ರಕರಣ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಸುಬ್ರಹ್ಮಣ್ಯ ವಲಯಾರಣ್ಯಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳು ದಾಳಿಯಲ್ಲಿ ಭಾಗವಹಿಸಿದ್ದರು.

 

 

 

Scroll to Top