ಎಲ್ಲಾ ಸೌಲಭ್ಯ ನೀಡಿದರೂ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಮುಖ: ಶಾಸಕ ಅಂಗಾರ ಆತಂಕ

(ನ್ಯೂಸ್ ಕಡಬ) newskadaba.com ಕಡಬ, ಜೂ.10. ಸರಕಾರಿ ಶಾಲೆಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಿದರೂ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು.

ಅವರು ಶುಕ್ರವಾರ ಕುಟ್ರುಪ್ಪಾಡಿ ಗ್ರಾಮದ ಕೇಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಕ್ಷರ ದಾಸೋಹ ಕಟ್ಟಡವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ರಾಜ್ಯ ಸರಕಾರ ಸರಕಾರಿ ಶಾಲೆಗಳಿಗೆ ಉತ್ತಮ ಶಿಕ್ಷಕರು, ಸದೃಢ ಕಟ್ಟಡಗಳು, ಮಧ್ಯಾಹ್ನದ ಊಟದ ವ್ಯವಸ್ಥೆ, ಉಚಿತ ಪಠ್ಯಪುಸ್ತಕ, ಸಮವಸ್ತ್ರ ಮುಂತಾದ ಎಲ್ಲಾ ಸೌಲಭ್ಯಗಳನ್ನು ನೀಡಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದರೂ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಹಿನ್ನೆಯಲ್ಲಿ ನಾವೆಲ್ಲಾ ಒಟ್ಟಾಗಿ ಸರಕಾರಿ ಶಾಲೆಗಳನ್ನು ಉಳಿಸುವಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ. ಒಂದು ಶಾಲೆ ಎಂದರೆ ದೇವಸ್ಥಾನವಿದ್ದಂತೆ, ದೇವಾಲಯವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕರು ಹೇಳಿದರು. ಇದೇ ವೇಳೆ ಶಾಲಾ ಅಭಿವೃದ್ಧಿಗೆ ಶಾಸಕರ ನಿಧಿಯಿಂದ ಅನುದಾನ ಒದಗಿಸುವ ಭರವಸೆ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತಾ.ಪಂ. ಸದಸ್ಯ ಗಣೇಶ್ ಕೈಕುರೆ, ಎ.ಪಿ.ಎಂ.ಸಿ ನಿರ್ದೆಶಕಿ ಪುಲಸ್ತ್ಯಾ ರೈ ಮಾತನಾಡಿದರು. ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಾನಕಿ ಸುಂದರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಆನಂದ ಪುಜಾರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಲ್ಲಾರ, ತಾಲೂಕು ಅಧ್ಯಕ್ಷ ಸುರೇಶ್ ಕುಮಾರ್, ಸಮೂಹ ಸಂಪನ್ಮೂಲ ವ್ಯಕ್ತ ಕುಮಾರ್, ಕುಟ್ರುಪ್ಪಾಡಿ ಗ್ರಾ, ಪಂ ಸದಸ್ಯರಾದ ಶಿವಪ್ರಸಾದ್ ರೈ ಮೈಲೇರಿ, ಬಿನೋಜ್ ವರ್ಗೀಸ್, ಯಶೋಧಾ ಪುವಳ, ಕುಸುಮಾವತಿ, ಜಾನಕಿ, ಮರ್ಧಾಳ ಗ್ರಾಮ ಪಂ.ಸದಸ್ಯ ದಾಮೋಧರ ಗೌಡ ಡೆಪ್ಪುಣಿ, ಎ.ಪಿ.ಎಂ.ಸಿ ನಿರ್ದೆಶಕ ಮೇದಪ್ಪ ಗೌಡ ಡೆಪ್ಪುಣಿ, ಧರ್ಮಗುರು ಫಾ|ಪಿ.ಕೆ.ಅಬ್ರಹಾಂ, ಎಸ್.ಡಿ.ಎಂ.ಸಿ ಅಧ್ಯಕ್ಷ ಗುಡ್ಡಪ್ಪ ಗೌಡ, ಉಪಾಧ್ಯಕ್ಷೆ ಮಿನಿ ಪ್ರಸಾದ್, ಕುಂತೂರು ಚರ್ಚಿನ ಧರ್ಮಗುರುಗಳಾದ ಫಾ| ಪಿ.ಕೆ. ಅಬ್ರಹಾಂ, ಸಾಮಾಜಿಕ ಕಾರ್ಯಕರ್ತರಾದ ಜಯರಾಮ ಗೌಡ ಅರ್ತಿಲ, ಹರೀಶ್ ಕೋಡಿಬೈಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ಮುಖ್ಯಗುರು ಹರಿಪ್ರಸಾದ್ ಉಪಾಧ್ಯಾಯ ಸ್ವಾಗತಿಸಿದರು. ಶಿಕ್ಷಕ ದಾಮೋಧರ ಗೌಡ ವಂದಿಸಿದರು. ಶಿಕ್ಷಕಿಯರಾದ ಮಿನಿ ವರ್ಗೀಸ್, ಗೀತಾ, ಭುವನೇಶ್ವರಿ ಕಾರ್ಯಕ್ರಮ ನಿರೂಪಿಸಿದರು.

error: Content is protected !!

Join the Group

Join WhatsApp Group