ಬಂಟ್ವಾಳ: ಲಾರಿ ಹಾಗೂ ಬೈಕ್ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) Newskadaba.com ಬಂಟ್ವಾಳ, ಜು. 07. ಲಾರಿ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಲ್ಲಿನ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಮಂಗಳೂರಿನ ಬ್ಯಾಂಕ್ ಒಂದರಲ್ಲಿ ಉದ್ಯೋಗಿಯಾಗಿದ್ದ ಮಂಚಿ ಗ್ರಾಮದ ಕಂಚಿಲ ನಿವಾಸಿ ಗಣೇಶ್ ನಾಯ್ಕ್ (55) ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಗಣೇಶ್ ಎಂನವರು ಬೆಳಗ್ಗೆ ಮನೆಯಿಂದ ಕಚೇರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಗಣೇಶ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Also Read  ಮಹಿಳೆಯರಿಗೆ ಉಚಿತ ಕೋಳಿ ಮರಿಗಳ ವಿತರಣೆ- ಅರ್ಜಿ ಆಹ್ವಾನ

error: Content is protected !!
Scroll to Top