ಇಂದಿನಿಂದ ಮಂಗಳೂರು – ಬೆಂಗಳೂರು ವಿಸ್ತಾಡೋಮ್ ರೈಲು ಸಂಚಾರ ಆರಂಭ ➤ ಶಿರಾಡಿಯ ಪ್ರಕೃತಿ ರಮಣೀಯ ದೃಶ್ಯ ಇನ್ನಷ್ಟು ಹತ್ತಿರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.11. ಮುಂಬೈ – ಪುಣೆ ನಡುವೆ ವಿಸ್ತಾಡೋಮ್ ರೈಲು ಸಂಚಾರದ ನಂತರ ಇದೀಗ ಕರ್ನಾಟಕದಲ್ಲಿ ಅತ್ಯಾಧುನಿಕ ವಿಸ್ತಾಡೋಮ್ ರೈಲ್ವೇಗೆ ಇಂದು ಚಾಲನೆ ದೊರೆಯಲಿದೆ.

ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಸಂಚರಿಸುವ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರು ವಿಸ್ಟಾಡೋಮ್‌ ಕೋಚ್‌ನಲ್ಲಿ ಕುಳಿತು ಪಶ್ಚಿಮಘಟ್ಟದ ಪ್ರಕೃತಿ ಸೌಂದರ್ಯ ಕಣ್ತುಂಬಿಕೊಳ್ಳುವ ಕಾಲ ಕೊನೆಗೂ ಕೂಡಿ ಬಂದಿದೆ. ಮಂಗಳೂರು ಜಂಕ್ಷನ್ ನಿಂದ ಇಂದು ಆರಂಭಗೊಳ್ಳಲಿರುವ ನೂತನ ವಿಸ್ತಾಡೋಮ್ ಕೋಚ್ ಹೊಂದಿರುವ ರೈಲಿಗೆ ಬೆಳಿಗ್ಗೆ 9 ಗಂಟೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಸಿರು ನಿಶಾನೆ ತೋರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇಂದಿನಿಂದ ಪ್ರಯಾಣಿಕರು ಈ ವಿಸ್ಟಾಡೋಮ್‌ ಕೋಚ್‌ನಲ್ಲಿ ಕುಳಿತು ಪಶ್ಚಿಮಘಟ್ಟಗಳ ಪ್ರಕೃತಿಯ ರಮಣೀಯ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದಾಗಿದೆ.

Also Read  ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!

 

 

 

error: Content is protected !!
Scroll to Top