ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ➤ ಪತ್ರಿಕಾ ವಿತರಕ ಬಾಲಕೃಷ್ಣ ರೈ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಜು.12. ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯನ್ನು ಸೋಮವಾರದಂದು ಕಡಬ ಪ್ರೆಸ್ ಕ್ಲಬ್ ನಲ್ಲಿ ನಡೆಸಲಾಯಿತು.

ಮುಖ್ಯ ಅತಿಥಿಗಳಾಗಿ ಕಡಬ ಠಾಣಾ ಉಪನಿರೀಕ್ಷಕ ರುಕ್ಮನಾಯ್ಕ್, ಕಡಬ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್.ದಿನೇಶ್ ಆಚಾರ್ಯ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ. ವಹಿಸಿದ್ದರು. ಈ ಸಂದರ್ಭದಲ್ಲಿ ಪತ್ರಿಕಾ ವಿತರಣಾ ಕ್ಷೇತ್ರದಲ್ಲಿನ ಸೇವೆಗಾಗಿ ಪತ್ರಿಕಾ ವಿತರಕ ಬಾಲಕೃಷ್ಣ ರೈ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಜೇಸಿಐ ಕಡಬ ಕದಂಬ ಘಟಕದ ಪೂರ್ವ ವಲಯಾಧಿಕಾರಿ ಅಶೋಕ್ ಕುಮಾರ್, ಪೂರ್ವಾಧ್ಯಕ್ಷ ಫಯಾಝ್ ಕಡಬ, ಪತ್ರಕರ್ತರ ಸಂಘದ ಕಾರ್ಯದರ್ಶಿ ವಿಜಯ ಕುಮಾರ್, ಸ್ಥಾಪಕಾಧ್ಯಕ್ಷ ಕೆ.ಎಸ್. ಬಾಲಕೃಷ್ಣ ಕೊಯಿಲ, ವಿವಿಧ ಪದಾಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಮೊದಲಾದವರು ಉಪಸ್ಥಿತರಿದ್ದರು.

Also Read  ಮಾರುಕಟ್ಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ - ದಂಡ ವಸೂಲಿ.!

 

 

 

error: Content is protected !!
Scroll to Top