(ನ್ಯೂಸ್ ಕಡಬ) Newskadaba.com ಸುಬ್ರಹ್ಮಣ್ಯ, ಜು. 14. ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡು ಸ್ನಾನಘಟ್ಟ ಮುಳುಗಡೆಯಾಗಿದೆ.
ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನದಿ, ತೋಡು, ಹಳ್ಳಗಳು ತುಂಬಿ ಹರಿಯುತ್ತಿವೆ. ಕುಮಾರಧಾರ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದರಿಂದಾಗಿ, ಸ್ನಾನ ಘಟ್ಟ ಹಾಗೂ ಸೇತುವೆ ಕೆಳ ಭಾಗದ ಕಿಂಡಿ ಅಣೆಕಟ್ಟು ಮುಳುಗಡೆಯಾಗಿದೆ. ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ನದಿಯ ದಡದಲ್ಲಿ ತೀರ್ಥಸ್ನಾನ ನೆರವೇರಿಸಲು ಅವಕಾಶ ಕಲ್ಪಿಸಲಾಗಿದೆ. ನದಿ ದಡದಲ್ಲಿ ಸುಬ್ರಹ್ಮಣ್ಯ ಠಾಣಾ ಪೊಲೀಸರು ಹಾಗೂ ಗೃಹರಕ್ಷಕ ದಳ ಸಿಬ್ಬಂದಿಗಳು ಕಾವಲು ನಿರತರಾಗಿದ್ದಾರೆ.