ಆತೂರು ಪೊಲೀಸ್ ಚೆಕ್ ಪೋಸ್ಟ್ ಧ್ವಂಸ ಪ್ರಕರಣ ➤ ಇಬ್ಬರ ಬಂಧನ | ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಜು.14. ಇತ್ತೀಚೆಗೆ ಕಡಬ ಠಾಣಾ ವ್ಯಾಪ್ತಿಯ ಆತೂರು ಎಂಬಲ್ಲಿ ಪೊಲೀಸ್ ಚೆಕ್ ಪೋಸ್ಟ್ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಯೂಸುಫ್ ಎಂಬವರ ಪುತ್ರ ತೌಸೀಫ್(30) ಮತ್ತು ಕೊಯಿಲ ಗ್ರಾಮದ ಸನ್ಯಾಸಿ ಮೂಲೆ ನಿವಾಸಿ ಅಬ್ದುಲ್ ರಜಾಕ್ ಎಂಬವರ ಪುತ್ರ ಮಹಮ್ಮದ್ ಶಾಕಿರ್(25) ಎಂದು ಗುರುತಿಸಲಾಗಿದೆ. ಜೂನ್ 29 ರಂದು ಆತೂರು ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಗೂಡ್ಸ್ ವಾಹನವೊಂದು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟಿದ್ದರು. ಈ ವೇಳೆ ಆಕ್ರೋಶಗೊಂಡ ಸಾರ್ವಜನಿಕರು ಪೊಲೀಸ್ ಚೆಕ್ ಪೋಸ್ಟ್ ಧ್ವಂಸಗೊಳಿಸಿದ್ದರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜುಲೈ 27 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಎಂಟು ಮಂದಿಯನ್ನು ಬಂಧಿಸಲಾಗಿದೆ.

Also Read  ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ 'ಅಬಾಕಸ್' ಗಣಿತ ತರಗತಿ ಉದ್ಘಾಟನೆ

 

 

 

error: Content is protected !!