(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.30. ಎಟಿಎಂ ಗೆ ಹಣ ತುಂಬುವ ವೇಳೆ 18 ಲಕ್ಷ ರೂ. ಕಸಿದು ಪರಾರಿಯಾಗಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಸೋಮವಾರ ಮುಂಜಾನೆ 6 ಗಂಟೆ ಸುಮಾರಿಗೆ ನಡೆದಿದೆ.
ಐಸಿಐಸಿಐ ಬ್ಯಾಂಕ್ ಎಟಿಎಂಗೆ ಹಣ ತುಂಬಿಸುವ ವೇಳೆ ಹೆಲ್ಮಟ್ ಧರಿಸಿ 220 ಪಲ್ಸರ್ ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಸೆಕ್ಯೂರ್ ವೆಲ್ ಏಜೆನ್ಸಿಯ ಮೂವರು ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದಾರೆ. ಪ್ರತಿರೋಧ ಒಡಿದ್ದಕ್ಕೆ ಕಸ್ಟೋಡಿಯನ್ ಮೋಹನ್ ಅವರಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು 18 ಲಕ್ಷ ರೂ. ಕಸಿದು ಪರಾರಿಯಾಗಿದ್ದಾರೆ.
ಮೋಹನ್, ಸಾಗರ್ ಹಾಗೂ ಪ್ರಸನ್ನ ಸೆಕ್ಯೂರ್ ವೆಲ್ ಏಜೆನ್ಸಿಯ ಸಿಬ್ಬಂದಿಗಳಾಗಿದ್ದು, ಎಟಿಎಂ ಗೆ ಹಣ ತುಂಬಲು ಒಟ್ಟು 1 ಕೋಟಿ, 25 ಲಕ್ಷ ರೂ. ಹಣ ತಂದಿದ್ದರು. ದುಷ್ಕರ್ಮಿಗಳು ಅದರಲ್ಲಿ 18 ಲಕ್ಷ, 50 ಸಾವಿರ ರೂ. ಹಣದ ಬ್ಯಾಗ್ ಕಸಿದು ಪರಾರಿಯಾಗಿದ್ದಾರೆ.
ಈ ಘಟನೆಯಿಂದ ಮೋಹನ್ ಗೆ ಗಂಭೀರ ಗಾಯವಾಗಿದ್ದು ಗೂರುಗುಂಟೆಪಾಳ್ಯದ ಸ್ವರ್ಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.