ವಿವಾದಿತ ಫೇಸ್‌ಬುಕ್‌ ಪೋಸ್ಟ್ ➤ ಸೌದಿಯ ಜೈಲಿನಲ್ಲಿದ್ದ ಮಂಗಳೂರಿನ ಹರೀಶ್ ಬಂಗೇರ ಬಿಡುಗಡೆ

(ನ್ಯೂಸ್ ಕಡಬ) Newskadaba.com ಮಂಗಳೂರು, ಜು. 16. ವಿವಾದಿತ ಫೇಸ್‍ಬುಕ್ ಪೋಸ್ಟ್ ಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಗಾಗಿದ್ದ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್‌ ಬಂಗೇರ ಎಸ್‌. ಅವರು ಜೈಲಿನಿಂದ ಬಿಡುಗಡೆಯಾಗಿ ಶೀಘ್ರದಲ್ಲೇ ತಾಯ್ನಾಡಿಗೆ ಮರಳಲಿದ್ದಾರೆ.

ಈ ಬಗ್ಗೆ ಮಂಗಳೂರು ಅಷೋಷಿಯೇಷನ್ ಸೌದಿ ಅರೇಬಿಯಾ(MASA) ಇದರ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಮಾಹಿತಿ ನೀಡಿ, ಶೀಘ್ರದಲ್ಲೇ ಹರೀಶ್ ಬಂಗೇರ ರವರು ತಾಯ್ನಾಡಿಗೆ ಮರಳಲಿದ್ದಾರೆ ಎಂದಿದ್ದಾರೆ. ಇವರ ವಿಮಾನ ಪ್ರಯಾಣದ ವೆಚ್ಚವನ್ನು ಕೂಡಾ ಮಂಗಳೂರು ಅಷೋಷಿಯೇಷನ್ ನ ಪರವಾಗಿ ಜೈಲಾಧಿಕಾರಿಗಳಿಗೆ ನೀಡಲಾಗಿದೆ. ಇವರ ಬಿಡುಗಡೆಯ ಎಲ್ಲಾ ದಾಖಲೆ ಪತ್ರಗಳು ಪೂರ್ಣವಾಗಿದ್ದು ಅವರು ಭಾರತ ಪ್ರಯಾಣದ ಸಿದ್ದತೆಯ ಕೊನೆಯ ಹಂತದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

Also Read  ಅಧಿಕಾರ ಇದ್ದಾಗ ಏನೂ ಮಾಡದವರು ಇದೀಗ ಯಾತ್ರೆ ಹೊರಟಿದ್ದಾರೆ ► ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ

error: Content is protected !!
Scroll to Top