ನೆಲ್ಯಾಡಿ: ಹಿಟ್ ಆ್ಯಂಡ್ ರನ್ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ



(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.16. ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರಿಯಶಾಂತಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.





ಗುಂಡ್ಯದಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಬೈಕಿಗೆ ವಿರುದ್ಧ ದಿಕ್ಕಿನಿಂದ ಆಗಮಿಸಿದ ಅಪರಿಚಿತ ವಾಹನವು ಲಾವತ್ತಡ್ಕ ಸಮೀಪ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಮೃತ ವ್ಯಕ್ತಿಯ ಪರಿಚಯ ಇನ್ನಷ್ಟೇ ದೊರೆಯಬೇಕಿದೆ. ಗಂಭೀರ ಗಾಯಗೊಂಡಿರುವ ಸಕಲೇಶಪುರ ತಾಲೂಕಿನ ಕೆಂಚಮ್ಮನ ಹೊಸಕೋಟೆ ನಿವಾಸಿ ಮೋಹನ್ ನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.






 

 

 

error: Content is protected !!
Scroll to Top