ನೆಲ್ಯಾಡಿ: ಹಿಟ್ ಆ್ಯಂಡ್ ರನ್ ➤ ಕೆಎಸ್ಸಾರ್ಟಿಸಿ ಬಸ್ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.16. ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದ ಕೆಎಸ್ಸಾರ್ಟಿಸಿ ಬಸ್ಸನ್ನು ನೆಲ್ಯಾಡಿ ಹೊರಠಾಣಾ ಪೊಲೀಸರು ಗುಂಡ್ಯದಲ್ಲಿ ವಶಪಡಿಸಿಕೊಂಡಿದ್ದಾರೆ.

ಸಕಲೇಶಪುರದಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಬೈಕಿಗೆ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಪೆರಿಯಶಾಂತಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ಸಂಜೆ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಸಕಲೇಶಪುರ ತಾಲೂಕಿನ ಕೆಂಚಮ್ಮನ ಹೊಸಕೋಟೆ ನಿವಾಸಿ ಮೋಹನ್ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅಪರಿಚಿತ ವಾಹನವನ್ನು ಬೆನ್ನಟ್ಟಿದ ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಗುಂಡ್ಯದಲ್ಲಿ ಬಸ್ಸನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Also Read  ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹ 2000 ನೆರವು ➤ ಕಂದಾಯ ಸಚಿವ ಆರ್. ಅಶೋಕ !

 

 

 

error: Content is protected !!
Scroll to Top