ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಐರಾವತ ಬಸ್ ➤ ಚಾಲಕ‌ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) Newskadaba.com ಮಡಿಕೇರಿ, ಜು. 19. ಚಾಲಕನ ನಿಯಂತ್ರಣ ತಪ್ಪಿದ ಐರಾವತ ಬಸ್ಸೊಂದು ರಸ್ತೆ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗಿನ ಗಡಿ ಪೆರುಂಬಾಡಿಯಲ್ಲಿ ಇಂದು ಮುಂಜಾನೆ ನಡೆದಿದೆ.

ಮೃತ ಚಾಲಕನನ್ನು ಬೆಂಗಳೂರಿನ ಸ್ವಾಮಿ ಎಂದು ಗುರುತಿಸಲಾಗಿದೆ. ವಿರಾಜಪೇಟೆ ಪೊಲೀಸರು ಹಾಗೂ ಕೇರಳ ಕಾರ್ಯ ಪಡೆಯ ಸಿಬ್ಬಂದಿಗಳ ಮೂರು ಗಂಟೆಯ ಕಾರ್ಯಾಚರಣೆಯ ಬಳಿಕ ಮೃತದೇಹವನ್ನು ಹೊರಕ್ಕೆ ತೆಗೆಯಲಾಗಿದೆ. ಬಸ್ಸಿನಲ್ಲಿದ್ದ ಉಳಿದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Scroll to Top