ಉಳ್ಳಾಲ: ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಕೊಠಡಿಗೆ ತಗುಲಿದ ಬೆಂಕಿ..! ➤ ವಿದ್ಯಾರ್ಥಿಗಳ ಸ್ಥಳಾಂತರ



(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 19. ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ದಿನವಾದ ಇಂದು ಪರೀಕ್ಷೆ ನಡೆಯುತ್ತಿದ್ದ ಕೊಠಡಿಗೆ ಬೆಂಕಿ ತಗುಲಿದ ಘಟನೆ ಉಳ್ಳಾಲದ ಬಬ್ಬುಕಟ್ಟೆ ಎಂಬಲ್ಲಿ ನಡೆದಿದೆ.








ಬಬ್ಬುಕಟ್ಟೆ ಖಾಸಗಿ ಶಾಲೆಯ ಲ್ಯಾಬ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ಕೊಠಡಿಗೂ ಬೆಂಕಿ ತಗುಲಿದೆ. ಈ ಸಂದರ್ಭ ತಕ್ಷಣವೇ ಕಾರ್ಯ ಪ್ರವೃತ್ತರಾದ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಬೇರೊಂದು ಕಟ್ಟಡಕ್ಕೆ ಸ್ಥಳಾಂತರ ಮಾಡಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಉಳ್ಳಾಲ ಠಾಣಾ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.






error: Content is protected !!
Scroll to Top