ನಾಳೆ (ಜು.20) ಸಂಜೆ 4:30ರ ವೇಳೆಗೆ ಪಿಯುಸಿ ಫಲಿತಾಂಶ ಪ್ರಕಟ ➤ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ನಾಳೆ (ಮಂಗಳವಾರ) ಸಂಜೆ 4.30ರ ವೇಳೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಸಂಜೆ 4.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದೆ. ಅಲ್ಲದೇ ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಲು ಪಿಯುಸಿ ಬೋರ್ಡ್ ನಿರ್ಧಾರ ಮಾಡಿದೆ. ಹೀಗಾಗಿ ಅಂಕಗಳ ಮಾದರಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಫಲಿತಾಂಶ ತಿಳಿಯಲು ನೋಂದಣಿ
ಸಂಖ್ಯೆ ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಅದಕ್ಕಾಗಿ ಇಲಾಖೆಯ ವೆಬ್ ಸೈಟ್ ನಲ್ಲಿ ‘Know my registration number’ ಎಂಬ ಲಿಂಕ್ ಮೂಲಕ ಪ್ರತಿ ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಪಡೆಯಬಹುದಾಗಿದೆ ಎಂದರು.

Also Read  ಶಾಲಾ-ಕಾಲೇಜು ದೋಚುತ್ತಿದ್ದ ಗ್ಯಾಂಗ್ ಪೊಲೀಸ್ ಬಲೆಗೆ     

error: Content is protected !!
Scroll to Top