ಕೊಕ್ಕಡ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 19. ಅಪ್ರಾಪ್ತೆಯನ್ನು ಕಾರಿನಲ್ಲಿ ಕೂರಿಸಿ ಲೈಂಗಿಕ ದೌರ್ಜನ್ಯವೆಸಗಲು ಯತ್ನಿಸಿದ ಆರೋಪಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಎಂಬಲ್ಲಿ ನಡೆದಿದೆ.


ಬಂಧಿತ ಆರೋಪಿಯನ್ನು ಕೊಕ್ಕಡ ನಿವಾಸಿ ರುಕ್ಮಯ್ಯ ಎಂದು ಗುರುತಿಸಲಾಗಿದೆ. ಈತ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕಾರಿನಲ್ಲಿ ಯುವತಿಯ ಮನೆಗೆ ಬಂದು ಬಾಲಕಿಯನ್ನು ಕಾರಿನಲ್ಲಿ ಬರಬೇಕು ಎಂದು ಬಲವಂತ ಮಾಡಿದ್ದಾನೆ. ಬಾಲಕಿ ಒಪ್ಪದೇ ಇದ್ದಾಗ ಕೊನೆಗೆ ಬೆದರಿಸಿ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ಹಿಂಸೆ ನೀಡಲು ಯತ್ನಿಸಿದ್ದು, ಈ ವೇಳೆ ಬಾಲಕಿ ಜೋರಾಗಿ ಕಿರುಚಿದಾಗ ಜೀವ ಬೆದರಿಕೆ ನೀಡಿ ಮನೆಗೆ ಕರೆತಂದು ಬಿಟ್ಟಿದ್ದಾನೆ. ಈ ಕುರಿತು ಬಾಲಕಿಯ ತಂದೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನನ್ವಯ ತನಿಖೆ ನಡೆಸಿದ ಪೊಲೀಸರು ಆರೋಪಿ ಕೊಕ್ಕಡ ನಿವಾಸಿ ರುಕ್ಮಯ್ಯ ಮಡಿವಾಳ ಎಂಬಾತನನ್ನು ಬಂಧಿಸಿದ್ದಾರೆ. ಈತ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತ ಎಂದು ತಿಳಿದುಬಂದಿದೆ. ಈತನ ಮೇಲೆ ಈ ಮೊದಲು ಕೂಡಾ ಇಂತಹ ಪ್ರಕರಣಗಳು ದಾಖಲಾಗಿದ್ದವು ಎನ್ನಲಾಗಿದೆ.

Also Read  ಇಂತಹ ಅಕ್ಷರಿಂದ ಹೆಸರು ಶುರು ಆಗುವ ಜನರನ್ನು ವಿವಾಹ ಜೇವನ ಅದ್ಬುತವಾಗಿರುತ್ತದೆ

error: Content is protected !!
Scroll to Top