ಜುಲೈ 26ರಿಂದ ಪದವಿ ಕಾಲೇಜುಗಳನ್ನು ತೆರೆಯಲು ರಾಜ್ಯ ಸರಕಾರದಿಂದ ಅನುಮತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ರಾಜ್ಯದಾದ್ಯಂತ ಪದವಿ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಕಾಲೇಜುಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಮೊದಲ ಡೋಸ್ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ ತಿಳಿಸಿದೆ.


ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪದವಿ ಕಾಲೇಜುಗಳನ್ನು ಜುಲೈ 26 ರಿಂದ ತೆರೆಯಲು ತೀರ್ಮಾನ ಕೈಗೊಳ್ಳಲಾಗಿದ್ದು, ಮೊದಲ ಕೋವಿಡ್ ಲಸಿಕೆ ಹಾಕಿಸಿಕೊಂಡ ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗೆ ಹಾಜರಾಗಲು ಅನುಮತಿ ನೀಡಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಜುಲೈ 26 ರಿಂದ ಪದವಿ ತರಗತಿಗಳನ್ನು ಆರಂಭಿಸಲು ಅನುಮತಿ ನೀಡಲಾಗಿದ್ದು, ಪದವಿ ಕಾಲೇಜುಗಳ ಎಲ್ಲ ಶೈಕ್ಷಣಿಕ ಚಟುವಟಿಕೆಗಳು ನಡೆಯಲಿವೆ.

Scroll to Top