ಕನ್ನಡದ ಖ್ಯಾತ ಹಿರಿಯ ನಟಿ ಜಯಂತಿ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.26. ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ(76) ಅವರು ರವಿವಾರ ರಾತ್ರಿ ನಿಧನರಾಗಿದ್ದಾರೆ.

1945ರಲ್ಲಿ ಬಳ್ಳಾರಿಯಲ್ಲಿ ಜನಿಸಿದ್ದ ನಟಿ ಜಯಂತಿ ಅವರು ವಿಷ್ಣುವರ್ಧನ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ಶ್ರೀನಾಥ್ ಮುಂತಾದ ನಟರ ಜೊತೆ ಅಭಿನಯಿಸಿದ್ದಾರೆ. ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ್ದರು. ಸುಮಾರು 500 ಚಿತ್ರಗಳಲ್ಲಿ ನಟಿಸಿದ್ದ ಜಯಂತಿ ಅವರು ಅಭಿನಯ ಶಾರದೆ ಎಂಬ ಬಿರುದಿಗೆ ಪಾತ್ರರಾಗಿದ್ದರು.

Also Read  ಉಪ್ಪಿನಂಗಡಿ: ಬಾಲಕನ ಮೇಲೆ ಬೀದಿನಾಯಿಗಳ ದಾಳಿ ➤ ಅಪಾಯದಿಂದ ಪಾರು

 

 

 

error: Content is protected !!
Scroll to Top