ಸಿಎಂ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ➤ ಹಲವು ದಿನಗಳ ರಾಜಕೀಯ ಪ್ರಹಸನಕ್ಕೆ ತೆರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.26. ರಾಜಕೀಯ ಏಳು ಬೀಳುಗಳ ನಡುವೆ ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿಂದು ಏರ್ಪಡಿಸಿದ್ದ ಸಮಾರಂಭದಲ್ಲಿ ವಿದಾಯ ಭಾಷಣ ಮಾಡಿದ ಅವರು, ತಮ್ಮ ರಾಜಕೀಯ ಏಳು – ಬೀಳುಗಳ ಜೊತೆಗೆ ತನ್ನ ಸ್ಥಾನಕ್ಕೆ ರಾಜೀನಾಮೆಯನ್ನು ಘೋಷಿಸಿ ಭಾವುಕರಾದರು. ಅಪರಾಹ್ನ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

Also Read  ಗ್ರಾಮ ಆಡಳಿತ ಅಧಿಕಾರಿ ಹುದ್ದೆ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ. 26 ಕೊನೆಯ ದಿನ

 

 

 

error: Content is protected !!
Scroll to Top