Breaking: ನೂತನ ಮುಖ್ಯಮಂತ್ರಿಯಾಗಿ ನಳಿನ್ ಕುಮಾರ್ ಕಟೀಲ್..??

Nalin Kumar kateel

(ನ್ಯೂಸ್ ಕಡಬ) newskadaba.com ನವದೆಹಲಿ, ಜು.26. ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ಅವರು ರಾಜೀನಾಮೆ ನೀಡಿರುವ ಬೆನ್ನಲ್ಲೇ ಇದೀಗ ಆ ಸ್ಥಾನಕ್ಕೆ ಕರಾವಳಿಯ ಪ್ರಭಾವಿ ಮುಖಂಡರ ಹೆಸರು ಕೇಳಿ ಬರುತ್ತಿದೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೆಸರು ಬಲವಾಗಿ ಕೇಳಿ ಬಂದಿದೆ. ಯಡಿಯೂರಪ್ಪ ರವರು ರಾಜೀನಾಮೆ ನೀಡುವ ಮಾಹಿತಿಯಿದ್ದ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರದಂದು ದಿಢೀರ್ ಆಗಿ ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಕುಂಜಾಡಿ ತರವಾಡು ಮನೆಗೆ ತೆರಳಿ ಕುಟುಂಬ ದೈವಕ್ಕೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ತುರ್ತಾಗಿ ಬೆಂಗಳೂರಿಗೆ ತೆರಳಿರುವ ಅವರು ಹೈಕಮಾಂಡ್ ಬುಲಾವ್ ಮೇರೆಗೆ ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Also Read  ಮಂಗಳೂರಿಗೆ ಆಗಮಿಸಿದ ಎಂ.ಎಸ್ ಧೋನಿ

ಈ ನಡುವೆ ಮಾಧ್ಯಮಗಳಲ್ಲಿ ನಳಿನ್ ಕುಮಾರ್ ಕಟೀಲ್ ಅವರ ಹೆಸರು ಮುಖ್ಯಮಂತ್ರಿ ಸ್ಥಾನಕ್ಕೆ ಕೇಳಿ ಬರುತ್ತಿರುವುದರ ನಡುವೆಯೇ ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಚರ್ಚೆ ಆರಂಭಗೊಂಡಿದೆ.

 

 

 

 

error: Content is protected !!
Scroll to Top