ಬಂಟ್ವಾಳ: ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) Newskadaba.com ಬಂಟ್ವಾಳ, ಜು. 30. ರೈಲ್ವೆ ಹಳಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ತಾಲೂಕಿನ ದೇವಂದಬೆಟ್ಟು ಎಂಬಲ್ಲಿ ನಡೆದಿದೆ.


ಮೃತ ಯುವಕನನ್ನು ಕಳ್ಳಿಗೆ ಗ್ರಾಮದ ಲಕ್ಷಣ ಎಂಬವರ ಮಗ ಕಾರ್ತಿಕ್ (25) ಎಂದು ಗುರುತಿಸಲಾಗಿದೆ. ಈತ ಗುರುವಾರದಂದು ಸಂಜೆ ಮನೆಯಿಂದ ಹೊರಟಿದ್ದು, ರಾತ್ರಿ 11 ಗಂಟೆಯವರೆಗೆ ಮನೆಗೆ ಬಾರದಿರುವ ಹಿನ್ನೆಲೆ ಮನೆಯವರು ಆತನಿಗಾಗಿ ಹುಡುಕಾಟ ಆರಂಭಿಸಿದ್ದರು. ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಕಾರ್ತಿಕ್ ನ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಈ ಕುರಿತು ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ರೈಲ್ವೆ ಇಲಾಖೆಯ ಅಧಿಕಾರಿಗಳು ಬೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

Also Read  ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಧರಣಿ ಸತ್ಯಾಗ್ರಹ ➤ ಪುತ್ತೂರು, ಕಡಬ ತಾಲೂಕಿನ ಅಂಗನವಾಡಿ ಕೇಂದ್ರಗಳು ಬಂದ್!

error: Content is protected !!
Scroll to Top