ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ➤ ದಕ್ಷಿಣ ಕನ್ನಡದಲ್ಲಿ ಆಗಸ್ಟ್ 10 ರ ವರೆಗೆ ಟಫ್ ರೂಲ್ಸ್ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ಜಿಲ್ಲೆಯಲ್ಲಿ ಕೊರೋನಾ ಎರಡನೇ ಅಲೆ ಮತ್ತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಲಾಗಿದೆ.

ಆಗಸ್ಟ್ 10 ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ರಾಜಕೀಯ, ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಮಾಸ್ಕ್ ಧರಿಸದಿದ್ದಲ್ಲಿ ದಂಡ ವಿಧಿಸುವಂತೆ ಆದೇಶದಲ್ಲಿ ತಿಳಿಸಲಾಗಿದ್ದು, ಮದುವೆ ಕಾರ್ಯಕ್ರಮಗಳಲ್ಲಿ ಕೇವಲ 50 ಜನ ಮಾತ್ರ ಸೇರುವಂತೆ ತಿಳಿಸಲಾಗಿದೆ. ಕಲ್ಯಾಣ ಮಂಟಪದಲ್ಲಿ ಹೆಚ್ಚಿನ ಜನ ಸೇರಿದ್ದಲ್ಲಿ ಮಂಟಪದ ಮಾಲಕರ ಮೇಲೆ ಎಫ್ಐಆರ್ ದಾಖಲಿಸುವಂತೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ವಿಪತ್ತು ನಿರ್ವಹಣಾ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Also Read  ನೂಜಿಬಾಳ್ತಿಲ ಗ್ರಾ.ಪಂ. ಉದ್ಯೋಗಿ ವಿಕ್ರಮ್ ರೈ ಆತ್ಮಹತ್ಯೆ

 

 

 

error: Content is protected !!
Scroll to Top