ನೆಲ್ಯಾಡಿ: ವಿಷ ಸೇವಿಸಿ ಆತ್ಮಹತ್ಯೆ



(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.31. ವಿಷ ಸೇವಿಸಿದ ವ್ಯಕ್ತಿಯೋರ್ವರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಶನಿವಾರ ರಾತ್ರಿ ನೆಲ್ಯಾಡಿಯಿಂದ ವರದಿಯಾಗಿದೆ.





ಆತ್ಮಹತ್ಯೆ ಮಾಡಿಕೊಂಡವರನ್ನು ನೆಲ್ಯಾಡಿ ಸಮೀಪದ ದೋಂತಿಲ‌ ನಿವಾಸಿ ರಾಮಕೃಷ್ಣ (38) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ತನ್ನ ಮನೆಯಲ್ಲಿ ವಿಷ ಸೇವಿಸಿದ್ದ ಇವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಹಾದಿ ಮಧ್ಯೆ ಮೃತಪಟ್ಟಿದ್ದಾರೆ‌. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.






 

 

 

error: Content is protected !!
Scroll to Top