ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ BSY ಮೂಲೆಗುಂಪು..? ➤ ಪಕ್ಷದ ಬ್ಯಾನರ್ ನಲ್ಲಿ ಯಡಿಯೂರಪ್ಪ ಫೋಟೋ ನಾಪತ್ತೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ರಾಜ್ಯ ಬಿಜೆಪಿಯ ಹಿರಿಯ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತನ್ನ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ವಾರ ಪೂರ್ತಿಯಾಗುವುದರ ಮೊದಲೇ ಬಿಜೆಪಿಯ ಬ್ಯಾನರ್‌ಗಳಿಂದಲೂ ಅವರ ಫೋಟೊ ತೆರವಾಗಿರುವುದು ಪಕ್ಷದ ಕಾರ್ಯಕರ್ತರನ್ನು ಆಕ್ರೋಶಭರಿತರನ್ನಾಗಿಸಿದೆ.

ಬೆಂಗಳೂರಿನ ಯಶವಂತಪುರ ಮಂಡಲ ಮಹಿಳಾ ಮೋರ್ಚಾ ಹಾಗೂ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸಭೆಗಳು ಶನಿವಾರದಂದು ಪ್ರತ್ಯೇಕವಾಗಿ ನಡೆದಿದ್ದು, ಎರಡೂ ಸಭೆಗಳ ವೇದಿಕೆಯಲ್ಲಿ ಅಳವಡಿಸಿದ್ದ ಬ್ಯಾನರ್‌ಗಳಲ್ಲಿ ಯಡಿಯೂರಪ್ಪ ಅವರ ಭಾವಚಿತ್ರ ನಾಪತ್ತೆಯಾಗಿತ್ತು.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಡಿ.ವಿ. ಸದಾನಂದ ಗೌಡ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವರ ಭಾವಚಿತ್ರಗಳನ್ನು ಬ್ಯಾನರ್‌ನಲ್ಲಿ ಹಾಕಲಾಗಿತ್ತು. ಆದರೆ, ಯಡಿಯೂರಪ್ಪ ಅವರ ಭಾವಚಿತ್ರವನ್ನು ಕೈಬಿಡಲಾಗಿರುವುದು ಬಿಎಸ್ವೈ ಅಭಿಮಾನಿಗಳಲ್ಲಿ ನಿರಾಶೆ ಮೂಡಿಸಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ವಾರ ಕಳೆಯುವಷ್ಟರಲ್ಲೇ ಯಡಿಯೂರಪ್ಪ ಅವರ ಫೋಟೋವನ್ನು ಪಕ್ಷದ ಬ್ಯಾನರ್‌ನಿಂದ ಕೈಬಿಟ್ಟಿರುವ ಕುರಿತು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ.

Also Read  ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ       ➤ ಮಾ.20ರಿಂದ 'RTE ಸೀಟಿ'ಗಾಗಿ ಅರ್ಜಿ ಸಲ್ಲಿಕೆ ಆರಂಭ…!!!

 

 

 

 

error: Content is protected !!
Scroll to Top