ಸ್ಕೂಟಿಗೆ ಢಿಕ್ಕಿ ಹೊಡೆದ ಕಾರು ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ಆ.02. ರಸ್ತೆ ದಾಟುತ್ತಿದ್ದ ಸ್ಕೂಟಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ಸಮೀಪದ ಬಜಗೋಳಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಮೃತ ವ್ಯಕ್ತಿಯನ್ನು ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಬಂಜನಾಕ್ಯಾರು ನಿವಾಸಿ ಶೇಖರ್ ದೇವಾಡಿಗ ಎಂದು ಗುರುತಿಸಲಾಗಿದೆ. ಮೃತರು ತನ್ನ ಸ್ಕೂಟಿಯನ್ನು ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಶೇಖರ್ ದೇವಾಡಿಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ‌.

 

 

 

 

Scroll to Top