ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಬೊಲೆರೋ ➤ ವೃದ್ಧೆಗೆ ಗಂಭೀರ ಗಾಯ



(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.04. ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ವಾಹನವೊಂದು ನದಿಗೆ ಬಿದ್ದ ಘಟನೆ ಸುಬ್ರಹ್ಮಣ್ಯ ಸಮೀಪದ ಕಲ್ಮಕಾರು ಸೇತುವೆಯ ಬಳಿ ಬುಧವಾರದಂದು ಸಂಭವಿಸಿದೆ.





ಕಡಮಕಲ್ಲು ಎಸ್ಟೇಟ್‌ನವರಿಗೆ ಸೇರಿದ್ದು ಎನ್ನಲಾದ ಬೊಲೆರೋ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಬೊಲೆರೋದಲ್ಲಿದ್ದ ವೃದ್ಧೆಯೋರ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನುಳಿದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.






 

 

 

error: Content is protected !!
Scroll to Top