ಮದುವೆಗೆ ಮನೆಯವರ ವಿರೋಧ ➤ ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ.14. ಮದುವೆಗೆ ಮನೆಯಲ್ಲಿ ವಿರೋಧ ವ್ಯಕ್ತವಾಗಿದ್ದರಿಂದ ಪ್ರೇಮಿಗಳು ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳನ್ನು ಚಾಮರಾಜನಗರದ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಕಾಂಚನ(20) ಹಾಗೂ ಶ್ರೀನಿವಾಸ್(26) ಎಂದು ಗುರುತಿಸಲಾಗಿದೆ. ಸ್ಟಾಫ್ ನರ್ಸ್ ಆಗಿದ್ದ ಕಾಂಚನ ಹಾಗೂ ಕಾರು ಚಾಲಕನಾಗಿದ್ದ ಶ್ರೀನಿವಾಸ್ ಪರಸ್ಪರ ಪ್ರೀತಿಸುತ್ತಿದ್ದು, ಇವರ ಮದುವೆಗೆ ಇಬ್ಬರ ಮನೆಯಲ್ಲೂ ವಿರೋಧ ವ್ಯಕ್ತವಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲೂಕು ತೇರಂಬಳ್ಳಿ ಕೆರೆಯ ಬಳಿ ಕಾರಿನೊಳಗೆ ಸೀಮೆ ಎಣ್ಣೆ ಸುರಿದು ಬಳಿಕ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Also Read  ಕದ್ರಿ ಪಾರ್ಕ್ ರಸ್ತೆ ಕಾಮಗಾರಿ ವಿಳಂಬ ಆರೋಪ ➤ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

 

 

 

 

error: Content is protected !!
Scroll to Top