ಹಾರ ಹಾಕಿ ಸನ್ಮಾನ ನಿಷೇಧ ಬೆನ್ನಲ್ಲೇ ಮತ್ತೊಂದು ಮಹತ್ವದ ನಿರ್ಧಾರ ➤ ಇತರ ನಾಯಕರಿಗೆ ಮಾದರಿಯಾದ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.14. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸರಕಾರಿ ಕಾರ್ಯಕ್ರಮಗಳಲ್ಲಿ ಹಾರ ಹಾಕಿ ಸನ್ಮಾನ ಮಾಡುವುದಕ್ಕೆ ಬ್ರೇಕ್ ಹಾಕಿದ್ದ ಸಿಎಂ ಬಸವರಾಜ ಬೊಮ್ಮಾಯಿ ಇದೀಗ ಮತ್ತೊಂದು ಮಹತ್ವದ ತೀರ್ಮಾನಕ್ಕೆ ನಾಂದಿ ಹಾಡಿದ್ದಾರೆ.

ಇನ್ಮುಂದೆ ತನಗೆ ಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡುವುದು ಬೇಡ ಎಂಬ ಹೊಸ ತೀರ್ಮಾನ ಕೈಗೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ತಾನು ಸಂಚರಿಸುವ ವೇಳೆ ಝೀರೋ ಟ್ರಾಫಿಕ್ ಹೆಸರಿನಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟಾಗುವುದನ್ನು ಮನಗಂಡು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

Also Read  ಗೃಹಜ್ಯೋತಿ ಯೋಜನೆ: ಹೊಸ ಗ್ರಾಹಕರಿಗೆ 'ಅರ್ಧ ಜ್ಯೋತಿ' ಭಾಗ್ಯ; ಇದರಿಂದ ಸರ್ಕಾರಕ್ಕೆ 600 ಕೋಟಿ ಉಳಿತಾಯ!

 

 

 

error: Content is protected !!
Scroll to Top